ಗುಜರಾತ-ಮಹಾರಾಷ್ಟ್ರದಿಂದ ತೊಂದರೆ: ಸಚಿವ ಲಕ್ಷ್ಮಣ ಸವದಿ ಹೇಳಿಕೆ

ರಾಯಚೂರು: ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಭಾಗವಹಿಸಿರುವ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ನಮಗೆ ಸಮಸ್ಯೆಯಾಗುತ್ತಿದೆ. ಮಹಾರಾಷ್ಟ್ರದಲ್ಲೂ ಮೂರು ಜಿಲ್ಲೆಯಲ್ಲಿ ಕೊರೋನಾ ಇಲ್ಲಾ. ಅಲ್ಲಿನ ಸೋಂಕಿತ ಜಿಲ್ಲೆಗಳಿಗೆ ಧಾರಾವಾಡ, ಬೆಳಗಾಂ, ಬಿಜಾಪುರದಿಂದ ಹೆಚ್ಚು ಜನ ಹೋಗಿದ್ದಾರೆ. 16 ರಿಂದ 18 ಸಾವಿರ ಜನರನ್ನ ರಾಜ್ಯಕ್ಕೆ ಕರೆತಂದಿದ್ದೇವೆ. ಗುಜರಾತ್ , ಮಹಾರಾಷ್ಟ್ರದ ಕೆಲವು ಪಟ್ಟಣಗಳಲ್ಲಿ ಕೊರೋನಾ ಹೆಚ್ಚಿದೆ. ಅಲ್ಲಿಂದ ಬಂದ ನಮ್ಮ ಜನರಿಂದ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.
ರಾಜ್ಯಸರ್ಕಾರ ಸಾರಿಗೆ ಸೌಲಭ್ಯ ಕೊಡಲು ತೀರ್ಮಾನಿದೆ. ನಮ್ಮ ರಾಜ್ಯದವರನ್ನ ಹೊರಗಡೆಯಿಂದ ಕರೆತರುತ್ತಿದ್ದೇವೆ, ಇಲ್ಲಿದ್ದವರನ್ನ ಕಳುಹಿಸುತ್ತಿದ್ದೇವೆ. ಪ್ರವಾಸಿ ಕಾರ್ಮಿಕರಿಂದ ರಾಯಚೂರಿಗೆ ಸಮಸ್ಯೆ ಬಂದಿದೆ. ನಾವು ಹೋರಾಡುತ್ತಿರುವುದು ಕೊರೋನಾ ವಿರುದ್ದ, ಸೋಂಕಿತರ ವಿರುದ್ದ ಅಲ್ಲಾ. ಕೊರೋನಾ ಬಂದವರನ್ನ ನೋಡುವ ದೃಷ್ಠಿ ಬದಲಾಗಿದೆ. ಸಮಾಜದಿಂದ ಅವರನ್ನ ತಿರಸ್ಕಾರ ದೃಷ್ಟಿಯಿಂದ ನೋಡುವುದನ್ನ ತಡೆಯಬೇಕಿದೆ ಎಂದರು.