Big Breaking- ಸಿಡಿಲು ಬಡಿದು ಒಂದೇ ಕುಟುಂಬದ ಮೂವರ ದುರ್ಮರಣ…

ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ಹೋದ
ಸಮಯದಲ್ಲಿ ಸಿಡಿಲು ಬಡಿತ
ಬಳ್ಳಾರಿ: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಂಭವಿಸಿದೆ.
ಮೃತರನ್ನ ರಾರಾವಿ ಗ್ರಾಮದ ಭೀರಪ್ಪ(45), ಸುನೀಲ (26) ಹಾಗೂ ವಿನೋದ (14) ಎಂದು ಗುರುತಿಸಲಾಗಿದ್ದು, ಕುರಿ ಮೇಯಿಸಲು ಹೋದಾಗ ದುರ್ಘಟನೆ ನಡೆದಿದೆ.
ಮೂವರ ಸಾವಿನಿಂದ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬಂಧಿಕರು ಸಾಂತ್ವನ ಹೇಳುತ್ತಿದ್ದಾರೆ. ಘಟನೆಯ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.