ಹುಬ್ಬಳ್ಳಿಯ ತಾರಿಹಾಳದ ಬಳಿ ಸಿಡಿಲಿಗೆ ಯುವಕ ದುರ್ಮರಣ…

ಹುಬ್ಬಳ್ಳಿಯಲ್ಲಿ ಸಿಡಿಲು ಬಡಿದು ಯುವಕ ಸಾವು; ಸ್ಥಳಕ್ಕೆ ಪೊಲೀಸರ ದೌಡು
ಹುಬ್ಬಳ್ಳಿ: ದನ ಮೇಯಿಸಲು ಹೋದಾಗ ಸಿಡಿಲು ಬಡಿದ ಪರಿಣಾಮ 17 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ತಾರಿಹಾಳ ಗ್ರಾಮದ ಅರುಣ ಚುರಮುರಿ ಎಂಬ 17 ವರ್ಷದ ಯುವಕನೇ ಸಿಡಿಲಿಗೆ ಬಲಿಯಾಗಿದ್ದಾನೆ. ಪ್ರತಿ ದಿನದಂತೆ ಇಂದು ಕೂಡಾ ದನ ಮೆಯಿಸಿಕೊಂಡು ಮರಳಿ ಮನೆಯತ್ತ ಬರುತ್ತಿದ್ದಾಗ ಮಳೆ ಆರಂಭವಾಗಿದೆ.ಆಗ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.