ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ನಿಧನ: ವೈಧಿಕ ಸಂಪ್ರದಾಯದಂತೆ ಅಂತ್ಯಕ್ರಿಯೆ
1 min readಸುರಪುರ: ರಾಯಚೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ಅನಾರೋಗ್ಯದಿಂದ ಕಳೆದ ರಾತ್ರಿ ಸುರಪುರದ ಸ್ವಗೃಹದಲ್ಲಿ ನಿಧನರಾಗಿದ್ದು, ಮುಷ್ಠೂರ ಗ್ರಾಮದ ಕೃಷ್ಣಾ ತೀರದಲ್ಲಿ ವೈಧಿಕ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.
ರಾಜಾ ರಂಗಪ್ಪ ನಾಯಕ, 1989-92ರ ಅವಧಿಯಲ್ಲಿ ಖಾನಾಪುರ ಎಸ್.ಎಚ್ ಮಂಡಲ ಪ್ರಧಾನರಾಗಿದ್ದರು. 1995ರಲ್ಲಿ ಕಲಬುರಗಿ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದರು. ಯಾದಗಿರಿ-ಜಿಲ್ಲೆಯ ಸುರಪುರ ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವುದರಿಂದ ಜಿಲ್ಲಾ ಪಂಚಾಯತಿ ಸದಸ್ಯರಿದ್ದಾಗಲೇ 196ರಲ್ಲಿ ನಡೆದ 11ನೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜೆಡಿಎಸ್ ನಿಂದ ಆಯ್ಕೆಯಾಗಿದ್ದರು.