Posts Slider

Karnataka Voice

Latest Kannada News

ರಾಜ್ಯಸಭೆ ಆಯ್ಕೆಯಾದ ದೇವೇಗೌಡ-ಖರ್ಗೆಗೆ ಅಭಿನಂದನೆ ತಿಳಿಸಿದ ಸಿಎಂ ಯಡಿಯೂರಪ್ಪ

1 min read
Spread the love

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಜೆಡಿಎಸ್ ನ ಎಚ್.ಡಿ.ದೇವೇಗೌಡ, ಕಾಂಗ್ರೆಸನ್ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಬಿಜೆಪಿಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ ತಿಳಿಸಿದ್ದಾರೆ.

ಟ್ವೀಟ್ ಮೂಲಕ ನಾಲ್ಕು ರಾಜ್ಯಸಭೆ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದು, *ಹಾಗೆಯೇ ಕಾಂಗ್ರೆಸ್ಸಿನಿಂದ ಆಯ್ಕೆಯಾಗಿರುವ ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತು ಜೆಡಿಎಸ್ ನಿಂದ ಆಯ್ಕೆಯಾಗಿರುವ ಮಾಜಿ ಪ್ರಧಾನಿ ಶ್ರೀ ದೇವೇಗೌಡರಿಗೂ ಶುಭ ಹಾರೈಕೆಗಳು* ಎಂದು ಬರೆದುಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೂಡ ರಾಜ್ಯಸಭೆಗೆ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಧುರೀಣ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.


Spread the love

Leave a Reply

Your email address will not be published. Required fields are marked *