ರಂಜಾನ್ ಪ್ರಾರ್ಥನೆಗೆ ಅವಕಾಶ ಕೋರಿ ಶಾಸಕ ಎನ್.ಎ.ಹ್ಯಾರಿಸ್ ಸಿಎಂಗೆ ಪತ್ರ

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪತ್ರ ಬರೆದಿದ್ದು, ರಂಜಾನ್ ಹಬ್ಬದ ಪ್ರಾರ್ಥನೆಯನ್ನು ನಿರ್ವಹಿಸಲು ಈದ್ಗಾ ಮೈದಾನ ಅಥವಾ ಮಸೀದಿಗಳಲ್ಲಿ ಅವಕಾಶ ನೀಡಬೇಕೆಂದು ಕೋರಿದರು.
ಕೊರೋನ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಮನೆಯಲ್ಲೇ ಮಾಡಿರುತ್ತಾರೆ. ತಜ್ಞರು ಮತ್ತು ವೈದ್ಯರ ಸಲಹೆ ಪಡೆದು ಪರಿಸ್ಥಿತಿ ನೋಡಿಕೊಂಡು ಪ್ರಾರ್ಥನೆ ಮಾಡುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪತ್ರ ಬರೆದಿರುವ ಶಾಸಕ ಹ್ಯಾರಿಸ್.