ಭಾರತದಲ್ಲಿ 100 ವರ್ಷಗಳಲ್ಲೇ ಅತಿ ಕೆಟ್ಟ ಆರ್ಥಿಕ ಪರಿಸ್ಥಿತಿ: ಆರ್‌ಬಿಐ ಗವರ್ನರ್
ನವದೆಹಲಿ: ಭಾರತದಲ್ಲಿ ನೂರು ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕೊವಿಡ್ ಅತೀ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಭಾರತೀಯ ರಿಸರ್ವ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಭಾರತೀಯ ಸ್ಟೇಟ್ ಬ್ಯಾಂಕ್‌ನ ಮುಖ್ಯಸ್ಥ ರಜನೀಶ್ ಕುಮಾರ್ ಅವರ ಜೊತೆ ವಿಡಿಯೋ ಸಂವಾದ ನಡೆಸಿದರು.
ಕೊರೋನಾ ಲಾಕ್‌ಡೌನ್‌ನಿಂದಾಗಿ ಭಾರತ ಸರ್ಕಾರವು ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಆರ್ಥಿಕತೆಗೆ ಭಾರಿ ಹಿನ್ನಡೆ ಉಂಟಾಗಿರುವುದರಿಂದ ಆರ್ಥಿಕತೆಯನ್ನು ಮತ್ತೆ ಬಲ ಪಡಿಸಲು ಏನು ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಯಿತು.
ಕಳೆದ ನೂರು ವರ್ಷಗಳಲ್ಲೇ ಭಾರತದಲ್ಲಿ ಅತಿ ಕೆಟ್ಟ ಆರ್ಥಿಕ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಆರೋಗ್ಯ ಸಮಸ್ಯೆಯೂ ಕೂಡ. ಹಣಕಾಸು ವ್ಯವಸ್ಥೆಯನ್ನು ಸುಧಾರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.