ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ “ಉಣಕಲ್”ನ ರೇಣುಕಾ ವಾಲಿಕಾರ ನೇಮಕ…!!!

ಬೆಂಗಳೂರು: ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಐವರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಐವರ ಪೈಕಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಉಣಕಲ್ ಗ್ರಾಮದ ರೇಣುಕಾ ಕಲ್ಲಪ್ಪ ವಾಲಿಕಾರ ಅವರನ್ನೂ ನೇಮಕ ಮಾಡಲಾಗಿದೆ.
ನೇಮಕವಾದ ರೇಣುಕಾ ಅವರಿಗೆ ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಅವರು ಸಂತಸ ವ್ಯಕ್ತಪಡಿಸಿದ್ದು, ಈ ಭಾಗದ ಕಾರ್ಯಕರ್ತರಿಗೆ ಮನ್ನಣೆ ಸಿಕ್ಕಿದೆ ಎಂದು ಹೇಳಲಾಗಿದೆ.