ಹತ್ತೆ ಗಂಟೆಯಲ್ಲೇ ದರೋಡೆಕೋರರನ್ನ ಹೆಡಮುರಿಗೆ ಕಟ್ಟಿದ ಪೊಲೀಸರು…!

ಹುಬ್ಬಳ್ಳಿ: ನಗರದ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿದ್ದ ಇಬ್ಬರು ಕಿರಾತಕರನ್ನ ಹತ್ತೆ ಗಂಟೆಯಲ್ಲಿ ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನ ಯಾಮಾರಿಸಿ, ಬೆದರಿಕೆ ಹಾಕಿ ಹಣ ದೋಚುತ್ತಿದ್ದರೆಂದು ಗೊತ್ತಾಗಿದೆ.

ಇಂದು ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ, 38 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದರು.
ಘಟನೆಯ ಜಾಡು ಹಿಡಿದು ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಐಟಿಸಿ ಗೋಡೌನ ಬಳಿಯಿರುವ ಸಿಸಿಟಿವಿ ಕ್ಯಾಮರಾಗಳು ಸಾಕ್ಷಿ ನೀಡಿದ್ದು, ಹಳಿಯಾಳ ರಸ್ತೆಯಲ್ಲಿ ಸಂಜೆ ಪಾರ್ಟಿ ಮಾಡುತ್ತ ಕುಳಿತ ಸಮಯದಲ್ಲಿ ಪೊಲೀಸರು ಆರೋಪಿಗಳನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ಸಪೆಕ್ಟರ್ ಮಲ್ಲಪ್ಪ ಹೂಗಾರ ನೇತೃತ್ವದಲ್ಲಿ ಹೆಡ್ ಕಾನ್ಸಟೇಬಲ್ ಶಿವಾನಂದ ಹಾಗೂ ಪೊಲೀಸ್ ಕಾನ್ಸಟೇಬಲ್ ದಿರೇಂದ್ರ ಪಮ್ಮಾರ ಆರೋಪಿಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.