Posts Slider

Karnataka Voice

Latest Kannada News

ಸಂತೋಷ ಲಾಡ ಫೌಂಡೇಷನ್ ವತಿಯಿಂದ ಧಾರವಾಡದಲ್ಲಿ “ರಂಗೇರಲಿದೆ ಸಾಂಸ್ಕೃತಿಕ ಸಂಭ್ರಮ”…

1 min read
Spread the love

77ನೇ ಸ್ವಾತಂತ್ರ್ಯ ದಿನಾಚರಣೆ: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಹಲವು ಕಾರ್ಯಕ್ರಮ

ಸಿಎಂ ಅಭಿನಂದನೆಗೆ ಲೇಸರ್ ಶೋ, ಸಾಂಸ್ಕೃತಿಕ ಸಂಭ್ರಮ, ಸಾಧಕರಿಗೆ ಸನ್ಮಾನ, ಸಂಗೀತ ಸಂಜೆ, ಫ್ಯಾಷನ್ ಶೋ

ಧಾರವಾಡ: 77 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸೆಪ್ಟೆಂಬರ್ 3ರಂದು ಸಂಜೆ 5 ಗಂಟೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

60 ಸಾವಿರ ಕೋಟಿ ರೂಪಾಯಿಗಳನ್ನು ಕರ್ನಾಟಕದ ಬಡ ಕುಟುಂಬಗಳಿಗೆ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿರುವ ಮುಖ್ಯಮಂತ್ರಿ  ಸಿದ್ದರಾಮಯ್ಯ ನವರಿಗೆ ಅಭಿನಂದನಾ ಪೂರ್ವಕವಾಗಿ ವಿಶೇಷ ಲೇಸರ್ ಶೋ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.

ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಧಕರಿಗೆ ಹಾಗೂ ಯೋಧರಿಗೆ ಸನ್ಮಾನ ಮತ್ತು ನಮ್ಮ ಭವ್ಯ ಪರಂಪರೆ ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಖ್ಯಾತ ಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್ ಅವರಿಂದ ಕಿರು ನಾಟಕ ಹಾಗೂ ಗಾಯಕಿ ಎಂ ಡಿ ಪಲ್ಲವಿ ಮತ್ತು ಇಂಡಿಯನ್ ಐಡಲ್ 18ರ ವಿಜೇತ ಗಾಯಕ ಸಲ್ಮಾನ್ ಅಲಿ ಅವರಿಂದ ಸಂಗೀತ ಸಂಜೆ ಆಯೋಜಿಸಲಾಗಿದೆ.

ಫ್ಯಾಷನ್ ಷೋ ರಂಗು

ದೇಶದ ಪ್ರಖ್ಯಾತ ಫ್ಯಾಷನ್ ಗುರು ಪ್ರಸಾದ್ ಬಿದ್ದಪ್ಪ ಅವರ ತಂಡದಿಂದ ನಮ್ಮ ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ದೇಸಿ ಸೀರೆಗಳಾದ ಇಳಕಲ್, ಮೊಳಕಾಲ್ಮೂರು, ಮೈಸೂರು ಸೀರೆಗಳನ್ನು ತೊಟ್ಟು 15 ಕ್ಕೂ ಅಧಿಕ ಮಿಸ್ ಇಂಡಿಯಾ ಸ್ಪರ್ಧಿಗಳು ಹೆಜ್ಜೆ ಹಾಕಲಿದ್ದಾರೆ.

ಮದುವಣಗಿತ್ತಿಯಂತೆ ಸಿದ್ಧವಾದ ಕೆಸಿಡಿ ಅಂಗಣ: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಡೆಯುತ್ತಿರುವ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ತಯಾರಿ ಭರ್ಜರಿಯಿಂದ ಸಾಗುತ್ತಿದ್ದು, ಎಲ್ಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಹೊಸತನದ ಕಾರ್ಯಕ್ರಮದಲ್ಲಿ‌ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂತೋಷ್ ಲಾಡ್ ಫೌಂಡೇಶನ್ ಅಧ್ಯಕ್ಷ ಆನಂದ ಕಲಾಲ್ ಅವರು ಮನವಿ ಮಾಡಿದ್ದಾರೆ.


Spread the love

Leave a Reply

Your email address will not be published. Required fields are marked *