ಈ ತಿಂಗಳೂ ಶಾಲೆ-ಕಾಲೇಜಿಗೆ ಹೋಗುವ ಹಾಗಿಲ್ಲ: ಸರಕಾರದ ಆದೇಶ
ಬೆಂಗಳೂರು: ಇದೇ ತಿಂಗಳ 21 ರಿಂದ ಕಂಟೈನಮೆಂಟ್ ಝೋನ್ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಬಹುದೆಂದು ಹೇಳಲಾಗಿತ್ತು. ಆದರೆ, ಅದನ್ನೂ ರದ್ದುಪಡಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಉಮಾಶಂಕರ, ಸಂದೇಹ ಪರಿಹಾರಕ್ಕಾಗಿ ಶಾಲೆ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನ ಈ ಮೊದಲು ನೀಡಲಾಗಿತ್ತು. ಆದರೆ, ಕೊರೋನಾ ಕಡಿಮೆಯಾಗದ ಹಿನ್ನೆಲೆಯಲ್ಲಿ ಇದನ್ನ ರದ್ದುಪಡಿಸಲಾಗಿದೆ.
ಸೆಪ್ಟಂಬರ್ ಅಂತ್ಯದವರೆಗೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗದಿರುವಂತೆ ಸೂಚಿಸಲಾಗಿದೆ. ಪರಿಸ್ಥಿತಿಯ ಅವಲೋಕನದ ನಂತರ ತೀರ್ಮಾನವನ್ನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದ್ದಾರೆ.
ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಪ್ರಕಟನೆಯನ್ನ ಶಿಕ್ಷಣ ಸಚಿವ ಸುರೇಶಕುಮಾರ ತಮ್ಮ ಫೇಸ್ ಬುಕ್ ಪೇಜಿನಲ್ಲೂ ಹಾಕಿಕೊಂಡಿದ್ದಾರೆ. ಹೀಗಾಗಿ ಸೆಪ್ಟಂಬರ್ 21ರಿಂದ ಶಾಲೆ-ಕಾಲೇಜುಗಳಿಗೆ ಹೋಗಬಹುದೆಂದುಕೊಂಡವರಿಗೆ ನಿರಾಸೆಯಾಗಿದೆ.