150 ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಹುಬ್ಬಳ್ಳಿ: ಹುಬ್ಬಳ್ಳಿಯ ಬದಾಮಿ ನಗರದ ಬಾಲ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, 150 ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ನೀಡುವ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಾಲಿಕೆ ಮಾಜಿ ಸದಸ್ಯೆ ಮೇನಕಾ ಹುರುಳಿ, ಮಲ್ಲಿಕಾರ್ಜುನ ಸಾವುಕಾರ, ಸಂತೋಷ ಚವ್ಹಾಣ, ಉಪಸ್ಥಿತರಿದ್ದರು.