ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಿಂಜರಿದರೆ ಕ್ರಮ- ಸಚಿವ ಜಗದೀಶ್ ಶೆಟ್ಟರ್
1 min read: ಕೋವಿಡ್ ಚಿಕಿತ್ಸೆಗೆ ಪ್ರಸ್ತುತ ಹುಬ್ಬಳ್ಳಿ ಧಾರವಾಡ ಅವಳಿನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿವೆ. ಈ ಜವಾಬ್ದಾರಿಯನ್ನು ಯಾವುದಾದರೂ ಆಸ್ಪತ್ರೆಗಳು ನಿರ್ಲಕ್ಷಿಸಿದರೆ ಅಂತಹ ಸಂಸ್ಥೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಸರ್ಕ್ಯೂಟ್ ಹೌಸಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯ ಕೋವಿಡ್ ಪರಿಸ್ಥಿತಿ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ಮಾಡಿದರು.
ಸರ್ಕಾರದ ಆದೇಶದಂತೆ ಕೊರೊನಾ ನಿಯಂತ್ರಣಕ್ಕಾಗಿ ಪ್ರತಿಭಾನುವಾರ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜನತೆಯು ಕೊರೋನಾ ಬಗ್ಗೆ ಭಯಪಡುವದಕ್ಕಿಂತ ಎಚ್ಚರಿಕೆ ವಹಿಸಿ ಪಾಲಿಸಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ತಿಳಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ ಚವ್ಹಾಣ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.