ವಿದ್ಯಾರ್ಥಿಗಳೊಂದಿಗೆ ‘ಬಿಸಿಯೂಟ’ ಸವಿದ ಶಿವಲೀಲಾ ಕುಲಕರ್ಣಿ…

ಧಾರವಾಡ: ಶಾಲಾ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಪೌಷ್ಟಿಕ ಆಹಾರ ಸರಬರಾಜು ಆಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಲು ಶಾಸಕ ವಿನಯ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿಯವರು ಮುಂದಾಗಿದ್ದು, ಅದಕ್ಕಾಗಿ ಸ್ವತಃ ಬಿಸಿಯೂಟ ಸವಿದ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸರಕಾರಿ ಶಾಲೆಗೆ ಭೇಟಿ ನೀಡಿದ ಶಿವಲೀಲಾ ಅವರು, ಮಕ್ಕಳೊಂದಿಗೆ ಸಾಲಿನಲ್ಲಿ ಕುಳಿತು ಊಟ ಮಾಡಿದರು. ಅದೇ ಸಮಯದಲ್ಲಿ ಮಕ್ಕಳೊಂದಿಗೆ ಮಾತನಾಡುತ್ತ ಬಿಸಿಯೂಟದ ಬಗ್ಗೆ ಮಾಹಿತಿಯನ್ನ ಪಡೆದುಕೊಂಡರು.
ಸುಮಾರು ಹೊತ್ತಿನವರೆಗೆ ವಿದ್ಯಾರ್ಥಿಗಳೊಂದಿಗೆ ಸಮಯ ಕಳೆದ ಶಿವಲೀಲಾ ಅವರು, ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು.