ಶಿವಳ್ಳಿ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ…

ಧಾರವಾಡ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಬಳಿಯ ಸುಳ್ಳ ರಸ್ತೆಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯರು ಬಸ್ಸಿನಲ್ಲಿದ್ದವರನ್ನ ಹೊರಗೆ ತೆಗೆದು ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಿದ್ದಾರೆ.
ಪ್ರಕರಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.