ಕೊರೋನಾ ಗೆದ್ದು ಬಂದ ತಂದೆ-ಮಗ: ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಟಾಂಗ್
ಬೆಂಗಳೂರು: ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆದ ಬಳಿಕ ಶಿವಾನಂದ ವೃತ್ತದ ಬಳಿಯಿರುವ ಸರ್ಕಾರಿ ನಿವಾಸಕ್ಕೆ ಸಿದ್ದರಾಮಯ್ಯ ಅವರು ಆಗಮಿಸಿದರು. ಸಿದ್ದರಾಮಯ್ಯ ಅವರೊಂದಿಗೆ ಪುತ್ರ ಡಾ. ಯತೀಂದ್ರ ಅವರೂ ಮನೆಗೆ ಆಗಮಿಸಿದರು. ಯತೀಂದ್ರ ಅವರ ಎರಡನೇ ಪರೀಕ್ಷಾ ವರದಿ ನೆಗಟಿವ್ ಬಂದಿದೆ.
ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ಸಿದ್ದರಾಮಯ್ಯ ಅವರ ವರದಿಯಲ್ಲಿ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.
ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಗುಣಮುಖರಾಗುವಂತೆ ತಮಗೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ.
ನಳೀನಕುಮಾರ ಕಟೀಲ್ ಗೆ ಟಾಂಗ್
ಬೆಂಗಳೂರಿನಲ್ಲಿ ನಡೆದಿರುವ ಘಟನೆಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲಗೆ ಟಾಂಗ್ ನೀಡಿದ್ದಾರೆ. ಟ್ವೀಟ್ ಮೂಲಕ ನೀಡಿರುವ ಟಾಂಗ್ ಹೇಗಿದೆ ನೋಡಿ..