Posts Slider

Karnataka Voice

Latest Kannada News

ಶಿರಾ ಚುನಾವಣೆ: ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲೇ ಮಾರಾಮಾರಿ

1 min read
Spread the love

ತುಮಕೂರುಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಉಪ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆಯಲ್ಲಿ ಭಾಷಣ ಮಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಜೆಡಿಎಸ್​ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬೆಳಗ್ಗೆಯಿಂದಲೂ ಕುಮಾರಸ್ವಾಮಿ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ ನಡೆಸುತ್ತಿದ್ದರು. ಸಂಜೆ ಸುಮಾರು 5.30ರ ವೇಳೆಗೆ ಬ್ರಹ್ಮಸಂದ್ರ ಗ್ರಾಮಕ್ಕೆ ತಮ್ಮ ಕಾರ್ಯಕರ್ತರೊಂದಿಗೆ ಆಗಮಿಸುತ್ತಿದ್ದಂತೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ಅಡ್ಡಿಪಡಿಸಿದ್ದರು.

ಈ ವೇಳೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾರಾಮಾರಿಗೆ ಇಳಿದರು. ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಗುಂಪನ್ನು ಚದುರಿಸಿದರು. ಇದೇ ವೇಳೆ ಭಾಷಣ ಮಾಡುತ್ತಿದ್ದ ಕುಮಾರಸ್ವಾಮಿ ಕೂಡ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸೋಲುವ ಭಯದಲ್ಲಿ ಇಂತಹ ಆಟಾಟೋಪಗಳಿಗೆ ಇಳಿಯುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.


Spread the love

Leave a Reply

Your email address will not be published. Required fields are marked *