ಸೋಮಾಪುರದ ಬಳಿ ವನಹಳ್ಳಿ ಬಸ್ಸಿಗೆ ಡಿಕ್ಕಿ ಹೊಡೆದ ಇನೋವಾ…

ಧಾರವಾಡ: ನಗರದಿಂದ ರೋಣದತ್ತ ಹೊರಟಿದ್ದ ಇನೋವಾ ವಾಹನವೂ ಧಾರವಾಡ ತಾಲೂಕಿನ ಸೋಮಾಪುರದ ಬಳಿ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಬೆಳಗಿನ ಜಾವ ವನಹಳ್ಳಿ ಗ್ರಾಮದಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದರಿಂದ ಇನೋವಾ ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆತನನ್ನ ಧಾರವಾಡದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಇನೋವಾದ ಮುಂಭಾಗ ಬಹುತೇಕ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆಯ ಎಎಸ್ಐ ಬಂಡಿವಡ್ಡರ ಭೇಟಿ ನೀಡಿ, ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.