SSLC ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಬದಲಾವಣೆ…!
1 min readಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದೆ. ಈ ಬಾರಿ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಈ ಬಾರಿ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳನ್ನು ಹೆಚ್ಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿ ವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರುತ್ತವೆ. ಆದರೆ ಈ ಬಾರಿ ಇದರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಈ ಸಲ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಬರಲಿವೆ. ಇನ್ನು ಎಸ್ಎಸ್ಎಲ್ ಸಿ ಪರೀಕ್ಷೆಯ ಅಂಕಗಳಲ್ಲಿಯೂ ಯಾವುದೇ ರೀತಿಯ ವ್ಯತ್ಯಾಸಗಳಿರುವುದಿಲ್ಲ. 100 ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ. ಇದರಲ್ಲಿ 20 ಅಂಕ ಇಂಟರ್ನೆಲ್ ಮತ್ತು 80 ಅಂಕಗಳಿಗೆ ಮುಖ್ಯ ಪರೀಕ್ಷೆ ನಡೆಯುತ್ತದೆ. ಉಳಿದಂತೆ, ಪರೀಕ್ಷೆ ಎಸ್ ಎಸ್ಎಲ್ ಸಿ ಬೋರ್ಡ್ ಸ್ಟಾಂಡರ್ಡ್ ನಂತೆಯೇ ನಡೆಯಲಿದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ.
ಇನ್ನು, ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾ ಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಜೂನ್ 21ರಿಂದ ಜುಲೈ 5ರವರೆಗೆ ಎಸ್ ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ.
ಎಸ್ ಎಸ್ಎಲ್ ಸಿ ಪರೀಕ್ಷೆಯ ವೇಳಾ ಪಟ್ಟಿ…
ಜೂನ್ -21 : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ
ಜೂನ್ – 24 : ಗಣಿತ
ಜೂ -28 : ವಿಜ್ಞಾನ
ಜೂ -30 : ತೃತೀಯ ಭಾಷೆಗಳಾದ ಹಿಂದಿ (Hindi) , ಕನ್ನಡ, ಇಂಗ್ಲೀಷ್ , ಉರ್ದು, ಸಂಸ್ಕೃತ, ಕೊಂಕಣಿ, ತುಳು,
ಜು -2 : ದ್ವಿತೀಯ ಭಾಷೆ ಇಂಗ್ಲೀಷ್ /ಕನ್ನಡ
ಜು- 5: ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.