Posts Slider

Karnataka Voice

Latest Kannada News

ಗುಡಿಸಲಿನಲ್ಲಿ ಅರಳಿದ ಪ್ರತಿಭೆ: ಮನೆ ಹುಡುಕಿಕೊಂಡು ಹೋದ ಸಚಿವ- ಮನದಾಳದ ಮಾತಿಗೆ ಅಶೋಕ ಸಜ್ಜನ ಕೃತಘ್ನತೆ

Spread the love

ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕ

ಬೆಂಗಳೂರು: ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿಯಾದ ಮಹೇಶ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಂದ ಭೇಷ್ ಎನಿಸಿಕೊಂಡಿದ್ದಾನೆ.


ಅವರ ತಾಯಿ ಮಲ್ಲವ್ವ ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ನಾನೇ ಹೋಗಿದ್ದೆ ಎಂದು ಸ್ವತಃ ಶಿಕ್ಷಣ ಸಚಿವ ಸುರೇಶಕುಮಾರ ಬರೆದುಕೊಂಡಿದ್ದಾರೆ.


ಮನೆಯಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ ಎಂದು ಹೇಳಿದ್ದಾರೆ ಸಚಿವರು.
ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು ಎಂದು ಸಚಿವರೇ ಬರೆದುಕೊಳ್ಳುವಂತೆ ಮಾಡಿದ್ದು ಕೂಡಾ ಮಹೇಶನ ಸಾಧನೆ.

ನಮ್ಮ ಹೆಮ್ಮೆಯ ಶಿಕ್ಷಣ ಸಚಿವರ ಮನದಾಳದ ಮಾತು ಐತಿಹಾಸಿಕ

ಇಂಥ ಧೀಮಂತ ಸಚಿವರನ್ನು ಪಡೆದ ವಿದ್ಯಾರ್ಥಿಗಳು ಪಾಲಕರು ಶಿಕ್ಷಕರು ಧನ್ಯರು ಮಾನ್ಯರು ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ.ರಿ.ರಾಜ್ಯ ಘಟಕ ಹುಬ್ಬಳ್ಳಿ ಇದರ ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ಪ್ರ.ಕಾ.ಮಲ್ಲಿಕಾರ್ಜುನ ಉಪ್ಪಿನ ಹೇಳಿದ್ದಾರೆ.


Spread the love

Leave a Reply

Your email address will not be published. Required fields are marked *