ಕುಂದಗೋಳ ಪಕ್ಷೇತರ ಅಭ್ಯರ್ಥಿಗೆ ಹುಬ್ಬಳ್ಳಿಯಲ್ಲಿ ಚಾಕು ಇರಿತ…!

ಹುಬ್ಬಳ್ಳಿ: ನಾಳೆ ಬೆಳಗಾದರೇ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಪಕ್ಷೇತರ ಅಭ್ಯರ್ಥಿಯೋರ್ವರಿಗೆ ಚಾಕು ಇರಿದಿರುವ ಪ್ರಕರಣ ನಗರದಲ್ಲಿ ನಡೆದಿದೆ.
ಕುಂದಗೋಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಲ್ಲಿಕಾರ್ಜುನ ತೋಟಗೇರ ಎಂಬ ಅಭ್ಯರ್ಥಿಯ ಮೇಲೆ ಚಾಕು ಇರಿತವಾಗಿದ್ದು, ಕಿಮ್ಸಗೆ ದಾಖಲು ಮಾಡಲಾಗಿದೆ.
ಚಂದ್ರಗಿರಿ ಲೇ ಔಟ್‌ನಲ್ಲಿರುವ ಸುನೀಲ ಖೋಡೆ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ನಿಖರವಾದ ಕಾರಣವೇನು ಎಂಬುದು ಗೊತ್ತಾಗಿಲ್ಲ. ಪೊಲೀಸರು ಕಿಮ್ಸಗೆ ಆಗಮಿಸಿ, ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.