ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು: ಪೊಲೀಸರ ವಿರುದ್ಧ ವಕೀಲರ ಆಕ್ರೋಶ
1 min readಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಜೆಎಂಎಫ್ಸಿ 2ನೇ ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್ಶೀಟ್ ಸಲ್ಲಿಸದೇ ಇರುವುದರಿಂದ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್ಶೀಟ್ ದಾಖಲಿಸಬೇಕಾಗಿತ್ತು. ಆದ್ರೆ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್ಶೀಟ್ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳು ಜಾಮೀನು ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದಾರೆ
ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವುದರಿಂದ ಹಿಡಿದು ಚಾರ್ಜ್ ಶೀಟ್ ಸಲ್ಲಿಸುವವರಿಗೂ ಪೊಲೀಸರ ವೈಫಲ್ಯ ಹಾಗೂ ನಿರ್ಲಕ್ಷ್ಯ ಕಾಣಿಸಿದ್ದು, ಉದ್ದೇಶ ಪೂರ್ವಕವಾಗಿ ಒಂದು ಕಡೆ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದೆ. ಗೃಹ ಸಚಿವರು ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತ್ತು ಮಾಡಬೇಕು ಎಂದು ಯುವ ವಕೀಲರ ಸಂಘ ಒತ್ತಾಯಿಸಿದೆ.