ದೇಶದ್ರೋಹಿ ವಿದ್ಯಾರ್ಥಿಗಳ ಕುಟುಂಬದವರು ಹುಬ್ಬಳ್ಳಿಯಲ್ಲಿ: ಪೊಲೀಸ್ ಆಯುಕ್ತರ ಭೇಟಿ

ಹುಬ್ಬಳ್ಳಿ: ಪಾಕಿಸ್ತಾನದ ಪರ ಘೋಷಣೆ ಕೂಗಿ ನ್ಯಾಯಾಂಗ ಬಂಧನದಲ್ಲಿರುವ ಕಾಶ್ಮೀರ ಮೂಲದ ವಿದ್ಯಾರ್ಥಿಗಳ ಕುಟುಂಬದವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರನ್ನ ಭೇಟಿ ಮಾಡಿದ್ರು.
ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ನವನಗರದ ಬಳಿಯಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾಯ್ದು ಭೇಟಿಯಾದ ಕುಟುಂಬದವರು, ಪ್ರಕರಣದ ಮಾಹಿತಿಯನ್ನ ಪಡೆದರು.
ದೇಶದ್ರೋಹಿ ವಿದ್ಯಾರ್ಥಿಗಳಿಗೆ ಈಗಾಗಲೇ 3ನೇ ಜೆಎಂಎಫ್ ಸಿ ನ್ಯಾಯಾಲಯ ಮಾರ್ಚ 2ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಇದರಿಂದ ಹುಬ್ಬಳ್ಳಿಯ ಉಪಕಾರಾಗೃಹದಲ್ಲಿ ಆರೋಪಿಗಳನ್ನಿಡಲಾಗಿದೆ.