ಪಾಕ್ ಪರ ಘೋಷಣೆ: ತಕರಾರಿಗೆ 5ರವರೆಗೆ ಅವಕಾಶ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪರ ಸಲ್ಲಿಸಿದ್ದ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಲು ಐದನೇಯ ಜಿಲ್ಲಾ ಸತ್ರ ನ್ಯಾಯಾಲಯ ಮಾರ್ಚ 5ರ ವರೆಗೆ ಕಾಲಾವಕಾಶ ನೀಡಿದೆ.
ಹೊಸೂರಿನಲ್ಲಿರುವ ಐದನೇಯ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಗಂಗಾಧರ ಅವರು ಸೋಮವಾರ ಆರೋಪಿತರ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದರು. ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿ ಸರಕಾರಿ ಅಭಿಯೋಜಕರು ಅರ್ಜಿ ಸಲ್ಲಿಸಿದ್ದರು. ಇದರಿಂದ ಆಕ್ಷೇಪಣೆ ಸಲ್ಲಿಸುವುದಕ್ಕೆ ಸರ್ಕಾರಿ ವಕೀಲರಿಗೆ ಮಾರ್ಚ್ 5ರ ವರೆಗೆ ಕಾಲಾವಕಾಶ ನೀಡಲಾಗಿದೆ.