ಸಕ್ಕರೆ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ…

ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಹಲವು ಸಮಸ್ಯೆಗಳ ಕುರಿತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಆರಂಭವಾಗಿದ್ದು, ಮಹತ್ವದ ಫಲಿತಾಂಶ ಹೊರ ಬೀಳುವ ಸಾಧ್ಯತೆಯಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ಹೋರಾಟ ನಡೆಸಿದ ನಂತರ ರಾಜಧಾನಿಯಲ್ಲಿ ನಡೆದಿರುವ ಸಭೆಯಲ್ಲಿ ಕುರುಬೂರು ಶಾಂತಕುಮಾರ ಸೇರಿದಂತೆ ಹಲವು ರೈತ ಮುಖಂಡರು ಹಾಗೂ ಕಾರ್ಖಾನೆ ಮಾಲೀಕರು ಭಾಗವಹಿಸಿದ್ದಾರೆ.
ಕಬ್ಬು ಬೆಲೆ ಹೆಚ್ಚಳ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಮುಖವಾಗಿ ಚರ್ಚೆ ಆರಂಭವಾಗಿದ್ದು, ಸಚಿವರು ಅಧ್ಯಕ್ಷತೆ ವಹಿಸಿದ್ದಾರೆ.