ಆಕೆಯ ಕಿರುಕುಳದಿಂದ ಖ್ಯಾತ ನಟ ಆತ್ಮಹತ್ಯೆಗೆ ಶರಣು…!

ಗೋರೆಗಾಂವ್(ಮಹಾರಾಷ್ಟ್ರ): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೊತೆ ಎಂಎಸ್ ಧೋನಿ; ದಿ ಅನ್ಟೋಲ್ಡ್ ಸ್ಟೋರಿ ಹಾಗೂ ಅಕ್ಷಯ್ ಕುಮಾರ್ ಅವರೊಂದಿಗೆ ಕೇಸರಿ ಚಿತ್ರದಲ್ಲಿ ನಟನೆ ಮಾಡಿದ್ದ ನಟ ಸಂದೀಪ್ ನಹರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈನ ಗೋರೆಗಾಂವ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಲ್ಲಿನ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುಂಚೆ ಫೇಸ್ಬುಕ್ ಅಕೌಂಟ್ನಲ್ಲಿ ವೀಡಿಯೋ ಶೇರ್ ಮಾಡಿರುವ ಅವರು, ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಧೋನಿ ಚಿತ್ರದಲ್ಲಿ ನಟನೆ ಮಾಡಿರುವ ಸುಶಾಂತ್ ಸಿಂಗ್ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಡದಿಯ ಕಿರುಕುಳ ನೀಡುತ್ತಿರುವ ಬಗ್ಗೆ ಫೇಸ್ ಬುಕ್ ನಲ್ಲಿ ವಿವರವಾಗಿ ಹೇಳಿಕೆ ನೀಡಿದ್ದ ನಟ, ಕೆಲವೊತ್ತಿನ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ.