ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ…
1 min readಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ವೃದ್ದಾಶ್ರಮವೊಂದರಲ್ಲಿ ಇದ್ದ ಜಯಶ್ರೀ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕಳೆದ ಜುಲೈ ತಿಂಗಳಿನಲ್ಲೂ ಆತ್ಮಹತ್ಯೆಗೆ ಯತ್ನಿಸಿದ್ದರು.
ತನ್ನ ಮೇಲೆ ಚಿಕ್ಕಂದಿನಿಂದಲೂ ದೌರ್ಜನ್ಯ ನಡೆಯುತ್ತಿದೆ ಎಂದು ಕುಟುಂಬ ಸದಸ್ಯರು ಹಾಗೂ ಮಾವನ ಮೇಲೆಯೂ ಅವರು ಆರೋಪ ಮಾಡಿದ್ದರು.
ತನ್ನ ಗೆಳೆತಿಯರಿಗೆ ಕಳೆದ ಬಾರಿ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನ ಹೇಳಿಕೊಂಡಿದ್ದ ಜಯಶ್ರೀ.