ಹುಬ್ಬಳ್ಳಿಯಲ್ಲಿ ಕೋವಿಡ್ ಗೆ ಹೆದರಿ ವ್ಯಕ್ತಿ ನೇಣಿಗೆ ಶರಣು…!?

ಹುಬ್ಬಳ್ಳಿ: ನಗರದ ಕೇಶ್ವಾಪುರ ಆಕಾಶ ಪಾರ್ಕಿನಲ್ಲಿ ಹೆಚ್ಚುತ್ತಿರುವ ಕೊರೋನಾಗೆ ಹೆದರಿ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ನಡೆದಿದೆ.

ಮನೆಯ ಕೋಣೆಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡು ಮಂಜುನಾಥ ಎಂಬುವವನು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿಯೂ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದ ಪರಿಣಾಮ, ಮಂಜುನಾಥ ಸಾಕಷ್ಟು ಮಾನಸಿಕವಾಗಿ ನೊಂದುಕೊಂಡಿದ್ದ. ಇದೇ ವಿಷಯವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದರೆಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಕೇಶ್ವಾಪುರ ಠಾಣೆಯ ಪೊಲೀಸರು, ಪರಿಶೀಲನೆಯನ್ನ ನಡೆಸಿ, ಶವವನ್ನ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.