ಹುಬ್ಬಳ್ಳಿ ಮಂಟೂರ ರಸ್ತೆಯಲ್ಲಿನ ಮರದಲ್ಲಿ ನೇತಾಡುತ್ತಿದ್ದ ಯುವಕನ ಶವ…!!!

ಮಂಟೂರ ರಸ್ತೆಯ ಮರದಲ್ಲಿ ಯುವಕನ ಶವ
ಸ್ಥಳಕ್ಕೆ ಪೊಲೀಸರ ಭೇಟಿ
ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಸುಮಾರು 25 ರಿಂದ 30 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಸ್ಥಳೀಯರು ಶವವನ್ನು ನೋಡಿ ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಮಾಹಿತಿಯನ್ನ ರವಾನೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು ಯುವಕನ ಶವವನ್ನು ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತಪಟ್ಟ ಯುವಕ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.
ಯಾರಿಗಾದರೂ ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಬಹುದಾಗಿದೆ.