ಕೋಟೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಆತ್ಮಹತ್ಯೆ ಯತ್ನ…!

ಧಾರವಾಡ: ತಾಲೂಕಿನ ಕೋಟೂರ ಗ್ರಾಮ ಪಂಚಾಯತಿ ಅಧ್ಯಕ್ಷೆಯೋರ್ವರು ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಕೋಟೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ದೊಡ್ಡಮನಿ ಅವರೇ ವಿಷ ಸೇವಿಸಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಗೊತ್ತಾಗಿದೆ.
ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಮುಂದಾಗಿದ್ದು, ಈ ಬಗ್ಗೆ ಗರಗ ಠಾಣೆಯ ಪೊಲೀಸರು ಮಾಹಿತಿಯನ್ನ ಕಲೆ ಹಾಕಿದ್ದು, ಪ್ರಕರಣ ದಾಖಲಾದ ಕುರಿತು ಮಾಹಿತಿ ಲಭಿಸಿಲ್ಲ.
ಗ್ರಾಮದ ಕೆಲವರು ವಾಹನದಲ್ಲಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಹೇಳಲಾಗಿದೆ.