Posts Slider

Karnataka Voice

Latest Kannada News

ಕೆಲಸವಿಲ್ಲದೇ ಖಿನ್ನತೆ- ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ನೇಣಿಗೆ ಶರಣು..

1 min read
Spread the love

ಬೆಂಗಳೂರು: ಒಂದು ವರ್ಷದಿಂದ ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತ ಈಜುಪಟು, ಶಿಕ್ಷಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಷ್ಟ್ರಮಟ್ಟದ ಈಜುಪಟು, 2019ರಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಜಿ.ಬಿ. ಶಿಲ್ಪಾ (41) ಜಯನಗರದ ಮಾರೇನಹಳ್ಳಿ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ಶರಣಾದ ಶಿಕ್ಷಕಿಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಶಿಲ್ಪಾ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಶಿಲ್ಪಾ ಮತ್ತು ನೀಲ ಕೃಷ್ಣ ಪ್ರಸಾದ್ ದಂಪತಿ ಅನ್ಯೋನ್ಯವಾಗಿಯೇ ಇದ್ದರು. ನಾಲ್ಕು ತಿಂಗಳ ಹಿಂದಷ್ಟೇ ಶಿಲ್ಪಾ ಅವರ ತಾಯಿ ಸಾವನ್ನಪ್ಪಿದ್ದರು. ಪ್ರತಿಷ್ಠಿತ ಶಾಲೆಯಲ್ಲಿ ಕ್ರೀಡಾ ಶಿಕ್ಷಕಿಯಾಗಿದ್ದ ಶಿಲ್ಪಾ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡಿದ್ದರು. ಕೆಲವು ದಿನಗಳ ಹಿಂದಷ್ಟೇ ಆಡಳಿತ ಮಂಡಳಿಗೆ ಪತ್ರ ಬರೆದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಕೊರೋನಾ ಹಿನ್ನೆಲೆಯಲ್ಲಿ ಶಿಲ್ಪಾ ಅವರ ಮನವಿಯನ್ನು ಪರಿಗಣಿಸಿರಲಿಲ್ಲ. ಒಂದು ವರ್ಷದಿಂದ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಶಿಲ್ಪಾ ಅವರು ಖಿನ್ನತೆಗೆ ಒಳಗಾಗಿದ್ದರು.

ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಕಿಗೆ ನೇಣು ಹಾಕಿಕೊಂಡು ಶಿಲ್ಫಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡೆತ್ ನೋಟ್ : ಆತ್ಮಹತ್ಯೆಗೂ ಮುನ್ನ ಶಿಲ್ಪಾ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ಅಸಹಾಯಕ ಬದುಕಿನ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದರೂ ಒಂದು ಶಾಲೆಯಲ್ಲಿ ಶಿಕ್ಷಕಿ ಕೆಲಸ ಪಡೆಯಲಾಗದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಒಂದು ವರ್ಷದಿಂದ ಕೆಲಸ ವಿಲ್ಲದೇ ಕಂಗಾಲಾಗಿದ್ದ ಶಿಲ್ಪಾ ಖಿನ್ನತೆಗೆ ಒಳಗಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ತಾಯಿ ತೀರಿಕೊಂಡಿದ್ದರು. ಬದುಕಿನ ಪಯಣವನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದು ಭಾವುಕ ಪದಗಳಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed