ಧಾರವಾಡ ಗ್ರಾಮೀಣ “CPI” ಆಗಿದ್ದ ಶ್ರೀಧರ ಸತಾರೆ ಅಮಾನತ್ತು…
1 min readಬೆಂಗಳೂರು: ವಿಧಾನಸಭೆಯ ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಧಾರವಾಡ ವೃತ್ತ ನಿರೀಕ್ಷಕರಾಗಿದ್ದ ಶ್ರೀಧರ ಸತಾರೆ ಅವರನ್ನ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ವೋದಯ ಶಿಕ್ಷಣ ಸಂಸ್ಥೆಯ ವಿಷಯವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ಈ ಸಂಬಂಧ ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ತೀವ್ರ ಆಕ್ರೋಶವ್ಯಕ್ತಪಡಿಸಿ, ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಒತ್ತಾಯಿಸಿದ್ದರು.
ರಾಜಧಾನಿಯಲ್ಲಿ ಸಾಕಷ್ಟು ಚರ್ಚೆಯಾಗಿದ್ದೆ ತಡ, ಇಂದು ಸಧ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದ ಶ್ರೀಧರ ಸತಾರೆ ಅವರನ್ನ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.