ಸಿಎಂರನ್ನ ವಾಲ್ಮೀಕಿ ಸ್ವಾಮೀಜಿ-ಸಚಿವರು ಭೇಟಿ ಮಾಡಿದ್ದೇಕೆ ಗೊತ್ತಾ..
ಬೆಂಗಳೂರು: ಪರಿಶಿಷ್ಟ ಪಂಗಡ ಜನಾಂಗಕ್ಕೆ ಶೇ. 7.5ರಷ್ಟು ಮೀಸಲಾತಿ ಜಾರಿ ಮಾಡುವಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿದ್ರು.
ಶೀಘ್ರವಾಗಿ ತಮ್ಮ ಬೇಡಿಕೆಯನ್ನ ಈಡೇರಿಸಬೇಕೆಂದ ಮನವಿ ಕೇಳಿಕೊಂಡ ಸ್ವಾಮೀಜಿಗಳು, ಬೇಡಿಕೆಯನ್ನ ಈಡೇರಿಸುವ ಮೂಲಕ ಸಮಾಜಕ್ಕೆ ಸಹಾಯ ಮಾಡುವಂತೆಯೂ ಕೇಳಿಕೊಂಡರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಲ್ಲ ಸಮಾಜಕ್ಕೆ ಪೂರಕವಾಗಿ ಸರಕಾರ ನಡೆದುಕೊಳ್ಳುತ್ತಿದೆ. ತಾವು ನೀಡಿರುವ ಮನವಿಗೆ ಪೂರಕವಾದ ನಿರ್ಧಾರವನ್ನ ತೆಗೆದುಕೊಳ್ಳುವ ಭರವಸೆಯನ್ನ ನೀಡಿದ್ರು.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.