Posts Slider

Karnataka Voice

Latest Kannada News

ಶಾಸಕರ ದೂರು: ಸಾಬೀತಾದ ಪ್ರಕರಣ- ತಹಶೀಲ್ದಾರ ಅಮಾನತ್ತು

1 min read
Spread the love

ಚಿಕ್ಕೋಡಿ: ಕೋವಿಡ್​ ನಿರ್ವಹಣೆಗೆ ನೀಡಿದ್ದ ಹಣವನ್ನು ದುರ್ಬಳಕೆ ಮಾಡಿದ ಆರೋಪದಡಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್​ ಚಂದ್ರಕಾಂತ ಭಜಂತ್ರಿಯನ್ನು ಅಮಾನತ್ತುಗೊಳಿಸಲಾಗಿದೆ.

ಕೋವಿಡ್ -19 ನಿರ್ವಹಣೆ ಸಂದರ್ಭದಲ್ಲಿ ಲಕ್ಷಾಂತರ ಹಣ ವೆಚ್ಚ ಹಾಗೂ ಟಾಸ್ಕ್​ ಪೋರ್ಸ್ ಸಮಿತಿಯ ಅನುಮೋದನೆ ಪಡೆಯದೆ ಹಣವನ್ನು ದುರ್ಬಳಕೆ ಮಾಡಿದ ಅಧಿಕಾರಿ ವಿರುದ್ದ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಚರ್ಚಿಸಲಾಗಿತ್ತು. ಈ ಕುರಿತು ಬೆಳಗಾವಿ ಜಿಲ್ಲೆ ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ ನಿಲುವಳಿ ಸೂಚನೆ ಮಂಡಿಸಿದ್ದರು.

ಹೀಗಾಗಿ, ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ಆದೇಶಿಸಿದ್ದರು. ತನಿಖಾ ವರದಿಯಲ್ಲಿ ಕರ್ತವ್ಯಲೋಪ ಸಾಬೀತಾದ ಹಿನ್ನಲೆ, ತಹಶೀಲ್ದಾರ್​ ಚಂದ್ರಕಾಂತ ಭಜಂತ್ರಿಯನ್ನು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಾಧಿಕಾರ ಪರವಾನಿಗೆ ಇಲ್ಲದೇ ಹೊರಗಡೆ ಹೋಗದಂತೆಯೂ ತಹಶೀಲ್ದಾರರಿಗೆ ಸೂಚನೆಯನ್ನ ನೀಡಲಾಗಿದೆ. ಶಾಸಕರ ಜಾಗೃತೆಯಿಂದ ಪ್ರಕರಣವೊಂದು ಬಯಲಿಗೆ ಬಂದಂತಾಗಿದೆ.


Spread the love

Leave a Reply

Your email address will not be published. Required fields are marked *

You may have missed