ತಾರಿಹಾಳ “ಸ್ಪಾರ್ಕರ್ ಸ್ಪೋಟ್”- ಬೆಂದಿದ್ದ ಮಹಿಳೆ ಕಿಮ್ಸನಲ್ಲಿ ಸಾವು…

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಪ್ಯಾಕ್ಟರಿಯೊಂದರಲ್ಲಿ “ಸ್ಪಾರ್ಕರ್ ಸ್ಪೋಟ್” ದ ಘಟನೆಯಲ್ಲಿ ಬೆಂಕಿಯಲ್ಲಿ ಬೆಂದು ಹೋಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೇ ಕಿಮ್ಸನಲ್ಲಿ ಸಾವಿಗೀಡಾಗಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನ ಮಾಡುವಂತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗದಗ ಮೂಲದ ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.