ಮೂಗಿನಲ್ಲಿ ನಿಂಬೆರಸ ಹಾಕಿಕೊಂಡ ಶಿಕ್ಷಕ ಸಾವು..!
1 min readಶಿಕ್ಷಕರೊಬ್ಬರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆಂದು ಹೇಳಲಾಗಿದೆ. ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಮೃತ ದುರ್ದೈವಿಯಾಗಿದ್ದು, ಆರೋಗ್ಯವಾಗಿದ್ದ ಇವರು ಮೂಗಿನೊಳಗೆ ನಿಂಬೆ ಹಣ್ಣಿನ ರಸ ಹಾಕಿಕೊಂಡ ಬಳಿಕ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ರಾಯಚೂರು: ಶಿಕ್ಷಕರೊಬ್ಬರು ಮೂಗಿಗೆ ನಿಂಬೆ ಹಣ್ಣಿನ ರಸ ಹಾಕಿಕೊಂಡ ಪರಿಣಾಮ ಸಾವನಪ್ಪಿರುವ ಘಟನೆ ಸಿಂಧನೂರು ನಗರದ ನಟರಾಜ ಕಾಲನಿಯಲ್ಲಿ ನಡೆದಿದೆ. ಶಿಕ್ಷಕರೊಬ್ಬರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಮೃತ ದುರ್ದೈವಿ. ಬೆಳಗ್ಗೆ ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಭಾರೀ ಸುದ್ದಿಯಾಗಿತ್ತು ವಿಜಯ್ ಸಂಕೇಶ್ವರ್ ಹೇಳಿಕೆ!
ಮೂಗಿನಲ್ಲಿ ನಾಲ್ಕು ಹನಿ ಲಿಂಬೆ ರಸ ಹಾಕುವುದರಿಂದ ಆಕ್ಸಿಜನ್ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಇತ್ತೀಚೆಗೆ ವಿಆರ್‌ಎಲ್ ಸಂಸ್ಥೆಯ ಮುಖ್ಯಸ್ಥ ವಿಜಯ್ ಸಂಕೇಶ್ವರ್ ಹೇಳಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅನೇಕರು ವಿಜಯಸಂಕೇಶ್ವರರ ಅಭಿಪ್ರಾಯಕ್ಕೆ ಸಮ್ಮತಿ ಸೂಚಿಸಿದ್ದರು.
ಇನ್ನು ಇದನ್ನು ಸ್ವತಃ ನಾನು ಪ್ರಯೋಗಿಸಿದ್ದೇನೆ. ಪರಿಚಯದ 200 ಜನರ ಮೇಲೆ ಪ್ರಯೋಗ ಮಾಡಿ ಅರ್ಧ ಗಂಟೆಯಲ್ಲಿ ಉತ್ತಮ ಫಲಿತಾಂಶ ದೊರೆತಿದೆ ಎಂದು ಹೇಳಿದ್ದರು. ಮೂಗಿನಲ್ಲಿ ಲಿಂಬೆರಸ ಹಾಕುವುದರಿಂದ ಲಂಗ್ಸ್‌ನಲ್ಲಿರುವ ಕಫ ಹೊರ ಬರುತ್ತದೆ. ಆಗ ಆಕ್ಸಿಜನ್ ಪ್ರಮಾಣ ಹೆಚ್ಚಾಗಿ ಉಸಿರಾಟದ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಸಂಕೇಶ್ವರ್ ಹೇಳಿದ್ದರು.
Vijay sankeshwar is doctor ? this is my quation
is it possible?