Posts Slider

Karnataka Voice

Latest Kannada News

ಶಾಲೆಗೋಗಿ ನಾಪತ್ತೆಯಾಗಿದ್ದ ಶಿಕ್ಷಕಿ ದೀಪಿಕಾ, ಶವವಾಗಿ ಪತ್ತೆ…!

1 min read
Spread the love

ನಾಪತ್ತೆಯಾಗಿದ್ದರ ಬಗ್ಗೆ ದೂರು ನೀಡಿದ್ದ ತಂದೆ

ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿದ್ದ ಶಿಕ್ಷಕಿ

ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಮೇಲುಕೋಟೆ‌ಯಲ್ಲಿ ನಡೆದಿದೆ. 28 ವರ್ಷದ ದೀಪಿಕಾ ಎಂಬಾಕೆ ಕೊಲೆಯಾದ ದುರ್ದೈವಿಯಾಗಿದ್ದಾರೆ. ಕೊಲೆಗೈದು ದುಷ್ಕರ್ಮಿಗಳು ಮಣ್ಣಿನಲ್ಲಿ ಹೂತು ಹಾಕಿದ್ದಾರೆ.
ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ದೀಪಿಕಾ ಮೇಲುಕೋಟೆಯ SET ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಾಲೆಗೆ ಹೋಗಿ ಆನಂತರ ದೀಪಿಕಾ ನಾಪತ್ತೆಯಾಗಿದ್ದರು. ಜನವರಿ 20ರ ಮಧ್ಯಾಹ್ನದಿಂದ ದೀಪಿಕಾ ನಾಪತ್ತೆಯಾಗಿದ್ದರು.

ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಿನ್ನೆ ಸಂಜೆ ಮೇಲೆಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿದೆ. ಇದೀಗ ಮಹಿಳೆ ಕೊಲೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶಿಕ್ಷಕಿ ದೀಪಿಕಾ ಇನ್ಸಾಟಾಗ್ರಾಂ ನಲ್ಲಿ ಸಾಕಷ್ಟು ಆಕ್ಟೀವ್ ಆಗಿದ್ದರು.


Spread the love

Leave a Reply

Your email address will not be published. Required fields are marked *

You may have missed