ಕೊರೋನಾ ಭಯದಿಂದ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ…!

ಮೈಸೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಸರಕಾರಿ ಶಾಲೆಯ ಶಿಕ್ಷಕನೋರ್ವರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಣಾನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊರೊನಾ ಪಾಸಿಟಿವ್ ಗೆ ಹೆದರಿ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನ ಲೋಕೇಶ ಎಂದು ಗುರುತಿಸಲಾಗಿದೆ. ಕೆ.ಆರ್. ನಗರ ತಾಲೂಕಿನ ಕೋಗಿಲೂರು ಗ್ರಾಮದಲ್ಲಿ ಶಿಕ್ಷಕರಾಗಿದ್ದ ಲೋಕೇಶ, ಕಾವೇರಿ ನದಿಗೆ ಹಾರಿದ್ದಾರೆ. ಮೃತ ಶಿಕ್ಷಕರ ಶವ ಕೇರಳಾಪುರ ಬಳಿಯಲ್ಲಿ ದೊರಕಿದೆ.
ಕೋಣನೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ತಾಲೂಕಿನ ಆಸ್ಪತ್ರೆಗೆ ರವಾನೆ ಮಾಡಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಲಾಗಿದೆ.