ಸರಕಾರಿ ಶಾಲೆ ಮುಖ್ಯಾಧ್ಯಾಪಕಿ ಅಮಾನತು
1 min readಬಾಗಲಕೋಟೆ: ಚಿಮ್ಮಡ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜೆ.ಆರ್.ಹಂಜಗಿ ಅವರು ರಜೆ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರಿಂದ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಮ್ಮಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತಿ ಹಾಗೂ ಸರಕಾರಿ ಪ್ರೌಢಶಾಲೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಬುಬಾಲನ್ ಅವರು ಚಿಮ್ಮಡ ಪ್ರೌಢಶಾಲೆಗೆ ಭೇಟಿ ನೀಡಿದಾಗ ಮುಖ್ಯ ಶಿಕ್ಷಕಿ ಹಂಜಗಿ ರಜೆ ಪಡೆಯದೇ ಗೈರು ಹಾಜರಾಗಿದ್ದು ಬೆಳಕಿಗೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಮಾಹಿತಿ ನೀಡದೇ ಇರುವುದನ್ನ ಅರಿತ ಸಿಇಓ ತಕ್ಷಣವೇ ಮುಖ್ಯ ಶಿಕ್ಷಕಿಯನ್ನ ಅಮಾನತುಗೊಳಿಸಿದರು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ಗ್ರಾಮ ಪಂಚಾಯತಿ ಅಧ್ಯಕ್ಷ ಗುರುಲಿಂಗಪ್ಪಾ ಪೂಜಾರಿ, ಪಿಡಿಓ ಎಂ.ಎಸ್.ರೂಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.