ಒಂದೇ ದಿನ ಒಂದೇ ಜಿಲ್ಲೆಯಲ್ಲಿ 11 ವಿದ್ಯಾರ್ಥಿಗಳು, 7 ಶಿಕ್ಷಕರಿಗೆ ಕೊರೋನಾ
ಚಿಕ್ಕಮಗಳೂರು: ಕೊರೋನಾ ಮಹಾಮಾರಿಯ ನಡುವೆಯೇ ಆರಂಭಗೊಂಡಿರುವ ಶಾಲಾ ಕಾಲೇಜುಗಳಲ್ಲಿ ಮತ್ತೆ ಆತಂಕದ ಛಾಯೆ ಮೂಡುತ್ತಿದೆ. ಇಂದು ಜಿಲ್ಲೆಯಲ್ಲಿ ಮತ್ತೆ ಹಲವು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇಂದು ಹನ್ನೊಂದು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಒಟ್ಟು ಹದಿನೈದು ವಿದ್ಯಾರ್ಥಿಗಳಿಗೆ ಕೋವಿಡ್- 19 ದೃಢಪಟ್ಟಿದೆ. ಈ ಮೊದಲು ಐದು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಂದು ಮತ್ತೆ ಏಳು ಶಿಕ್ಷಕರಿಗೆ ಕೊರೋನಾ ದೃಢಪಟ್ಟಿದೆ.
ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನ ಪತ್ತೆ ಹಚ್ಚಿ, ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ ಹೇಳಿದರು.
