ನವಲಗುಂದ ವೀರಶೈವ ಲಿಂಗಾಯತ ಸಮಾಜದ ಪ್ರಮುಖ ಸಕ್ರಪ್ಪ ಹಳ್ಳದ ಇನ್ನಿಲ್ಲ…

ನವಲಗುಂದಃ ಸ್ಥಳೀಯ ವೀರಶೈವ ಲಿಂಗಾಯತ ಸಮಾಜದ ಹಿರಿಯ ಸಮಾಜದ ಚಿಂತಕರಾದ ಹಳ್ಳದ ಓಣಿ ನಿವಾಸಿ ಸಕ್ರಪ್ಪ ಹಕ್ರಪ್ಪ ಹಳ್ಳದ (69) ಮಂಗಳವಾರ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸಕ್ರಪ್ಪನವರ ನಿಧನಕ್ಕೆ ಹಿರೇಮಠದ ಸಿದ್ದೇಶ್ವರ ಸ್ವಾಮೀಜಿ, ಗವಿಮಠದ ಶ್ರೀ ಬಸವಲಿಂಗ ಸ್ವಾಮೀಜ, ಸಿದ್ದನಕೊಳ್ಳ ಸ್ವಾಮೀಜಿ, ನಾಗಲಿಂಗ ಸ್ವಾಮೀಜಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ಕೆ.ಎನ್.ಗಡ್ಡಿ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ವಿನೋದ ಅಸೂಟಿ, ಲಾಲಘಡ ಮಾರುತಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಸೇರಿದಂತೆ ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ನವಲಗುಂದದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.