Posts Slider

Karnataka Voice

Latest Kannada News

ವೀರಶೈವ ಮಹಾಸಭಾ ಅಧ್ಯಕ್ಷೆಯಾಗಿ ಯಡಿಯೂರಪ್ಪ ಪುತ್ರಿ ಅರುಣಾದೇವಿ ನೇಮಕ

Spread the love

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ.

ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅರುಣಾದೇವಿ ಅವರು ಪದಗ್ರಹಣ ಮಾಡಿದರು. ಅವರೊಂದಿಗೆ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ಅವರು ಅಧಿಕಾರ ಸ್ವೀಕರಿಸಿದರು. ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಅವರ ಉಪಸ್ಥಿತಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಅರುಣಾದೇವಿ ಅವರು ಶಿವಮೊಗ್ಗದಿಂದ ವೀರಶೈವ ಮಹಾಸಭಾವನ್ನು ಪ್ರತಿನಿಧಿಸುತ್ತಿದ್ದಾರೆ. ಹಾಗೆಯೆ ಕೋಶಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಜಿ. ಗುರುಬಸಪ್ಪ ಅವರು ಬೆಂಗಳೂರು ಮಹನಾಗರದಿಂದ ವೀರಶೈವ ಮಹಾಸಭಾವನ್ನು ಪ್ರತಿನಿಧಿಸುತ್ತಿದ್ದಾರೆ.

ಇಬ್ಬರಿಗೂ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಅವರು ಶುಭಹಾರೈಸಿದರು.


Spread the love

Leave a Reply

Your email address will not be published. Required fields are marked *