ವಿದ್ಯಾನಗರ ಠಾಣೆ ಪೊಲೀಸರ ಕಾರ್ಯಾಚರಣೆ- ಇಬ್ಬರು ಮನೆಗಳ್ಳರ ಬಂಧನ

ಹುಬ್ಬಳ್ಳಿ: ಅವಳಿನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನ ಹುಬ್ಬಳ್ಳಿಯ ಮೊಹ್ಮದಅಲಿ ಅಲ್ಲಾಭಕ್ಷ್ಯ ನಾಲಬಂದ ಹಾಗೂ ಹಳೇಹುಬ್ಬಳ್ಳಿಯ ಅಬ್ದುಲಖಾದರಜೈಲಾನಿ ಗಜಬರಸಾಬ ಮುಜಾವರ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 82.250 ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ, ಇಬ್ಬರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿಸಿಪಿಗಳಾದ ಕೆ.ರಾಮರಾಜನ್ ಹಾಗೂ ಆರ್.ಬಿ.ಬಸರಗಿ ಅವರ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್ ಮಹಾಂತೇಶ ಹೊಳಿ ಹಾಗೂ ತಂಡವು ಆರೋಪಿಗಳನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.