ಕಾಂಗ್ರೆಸ್ಸಿಂದ ವಿಜಯ ಗುಂಟ್ರಾಳ ಉಚ್ಚಾಟನೆ: ಶಾಸಕರ ವಿರುದ್ಧ ಹೇಳಿಕೆ ನೀಡಿದ್ದ ಗುಂಟ್ರಾಳ

ಹುಬ್ಬಳ್ಳಿ: ಪೌರಕಾರ್ಮಿಕರ ಮತ್ತು ನೌಕರರ ಹೋರಾಟ ಹತ್ತಿಕ್ಕಲು ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಯತ್ನಿಸುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ವಿಜಯ ಗುಂಟ್ರಾಳರನ್ನ ಉಚ್ಚಾಟನೆ ಮಾಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರೂ ಆಗಿರುವ ವಿಜಯ ಗುಂಟ್ರಾಳ, ಶಾಸಕ ಪ್ರಸಾದ ಅಬ್ಬಯ್ಯ ವಿರುದ್ಧ ಹೇಳಿಕೆ ನೀಡಿದ್ದು, ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ತಮ್ಮದೇ ಶಾಸಕರ ಬಗ್ಗೆ ಮಾತಾಡಿದ್ದು, ಪಕ್ಷಕ್ಕೆ ಮುಜುಗರ ತಂದಿದೆ ಎಂದು ಅಲ್ತಾಫಹುಸೇನ ಹೇಳಿದ್ದಾರೆ.
ಮಹಾನಗರ ಜಿಲ್ಲಾ ಶಿಸ್ತು ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಹಳ್ಳೂರ ಸ್ಪಷ್ಟವಾಗಿ ಹೇಳಿದ್ದಾರೆ.