ಎಫ್ಐಆರ್ ರದ್ದು ಕೋರಿದ್ದ ವಿನಯ ಕುಲಕರ್ಣಿಗೆ ನಿರಾಸೆ…

ಬೆಂಗಳೂರು: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲು ಮಾಡಿದ್ದ ಪ್ರಕರಣವನ್ನ ರದ್ದು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಮಾಜಿ ಸಚಿವ ವಿನಯ ಕುಲಕರ್ಣಿಯವರ ಮೇಲೆ ಸಿಬಿಐ ಪ್ರಕರಣ ದಾಖಲು ಮಾಡಿ ಕಳೆದ ನವೆಂಬರ್ 5ರಂದು ಬಂಧನ ಮಾಡಿತ್ತು. ತದನಂತರ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದ ವಿನಯ ಕುಲಕರ್ಣಿ, ಸಿಬಿಐ ದಾಖಲು ಮಾಡಿದ್ದ ಪ್ರಕರಣವನ್ನ ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟಿನ ದ್ವಿಸದಸ್ಯ ಪೀಠ, ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದ್ದು, ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಈ ಮೂಲಕ ನಿರಾಸೆ ಮೂಡಿದಂತಾಗಿದೆ.