“ಡರೋ ಮತ್ತ್” ಎಂದು ಧೈರ್ಯ ತುಂಬಿ, ಮಾನವೀಯತೆ ಮೆರೆದ Mla “ವಿನಯ ಕುಲಕರ್ಣಿ”

ದಾವಣಗೆರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಧೈರ್ಯ ತುಂಬುವ ಜೊತೆಗೆ ಆತನನ್ನ ಆಸ್ಪತ್ರೆಗೆ ರವಾನಿಸಿದ ಧಾರವಾಡ ಗ್ರಾಮೀಣ ಶಾಸಕ ಹಾಗೂ ನಿಗಮ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಅವರು ಜನಮೆಚ್ಚುಗೆ ಗಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ಕಾರ್ಯ ಮಾಡಲು ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ವಿನಯ ಕುಲಕರ್ಣಿ ತೆರಳಿದ್ದರು.
Videos…
ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಾಪಸ್ ಬರುತ್ತಿದ್ದ ಸಮಯದಲ್ಲಿ ಹರಿಹರದ ಸಮೀಪ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು, ತಕ್ಷಣವೇ ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಿ, ಅಂಬ್ಯುಲೆನ್ಸ ವ್ಯವಸ್ಥೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.