ಮಾರ್ಚ್ 17ಕ್ಕೆ ವಿನಯ ಕುಲಕರ್ಣಿ ಜಾಮೀನು ಅರ್ಜಿ ತೀರ್ಪು…!
1 min readಬೆಂಗಳೂರು: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಜಾಮೀನು ಅರ್ಜಿಯ ತೀರ್ಪನ್ನ ಮಾರ್ಚ 17ಕ್ಕೆ ಕಾಯ್ದಿರಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಯೋಗೇಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆದಿತ್ತು.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲದಲ್ಲಿ ಸಿಬಿಐ ಪರವಾಗಿ ಸುಪ್ರೀಂಕೋರ್ಟ್ ಅಸೋಸಿಯೇಟ್ ಸಾಲಿಸೇಟರ್ ಜನರಲ್ ಎಸ್.ವಿ.ರಾಜು ಅವರು ವಾದವನ್ನ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ವಿನಯ ಕುಲಕರ್ಣಿಯವರ ಪರವಾಗಿ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿ ಪ್ರತಿವಾದ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಇದೇ ತಿಂಗಳ 17ಕ್ಕೆ ತೀರ್ಪು ಪ್ರಕಟಿಸುವುದಾಗಿ ನ್ಯಾಯಾಧೀಶರು ಆದೇಶ ಮಾಡಿದರು.