ಬಡವರ ಮಕ್ಕಳ ಹೋರಾಟಕ್ಕೆ “ಅವಳಿನಗರ”ದಲ್ಲಿ ತಾರ್ಕಿಕ ಅಂತ್ಯ…
1 min readಹುಬ್ಬಳ್ಳಿ-ಧಾರವಾಡ ನೀರು ಸರಬರಾಜು
270 ನೌಕರರ ಮರು ನೇಮಕ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದಗೆ ಸನ್ಮಾನ
ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಕಳೆದ ಇಪ್ಪತ್ತು ವರ್ಷಗಳಿಂದ ನೀರು ಸರಬರಾಜು ಮಾಡುತ್ತ ಬಂದಿದ್ದ 270 ನೀರು ಸರಬರಾಜು ನೌಕರರ ಮರುನೇಮಕ ಮಾಡಿಕೊಂಡ ಹಿನ್ನೆಲೆಯಲ್ಲಿ ಜನಜಾಗೃತಿ ಸಂಘದ ವತಿಯಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ, ಮಹಾಪೌರ ಈರೇಶ ಅಂಚಟಗೇರಿ, ಮಾಜಿ ಶಾಸಕ ಅಮೃತ ದೇಸಾಯಿಯವರನ್ನ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎಲ್ಲಾ ನೌಕರರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಎಲ್ಲಾ ನೌಕರರು ಒಗ್ಗಟ್ಟಿನಿಂದ ಮತ್ತು ಶಿಸ್ತಿನಿಂದ ಕೆಲಸ ಮಾಡಿ ನಮಗೂ ಹಾಗೂ
ಸಂಸ್ಥೆಗೆ ಒಳ್ಳೆಯ ಹೆಸರು ತನ್ನಿ ಎಂದರು.
*ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಮ್ಮ ಎಲ್ಲಾ 270 ನೌಕರರ ಮರುನೇಮಕ ಮಾಡಿಕೊಳ್ಳುವುದಾಗಿ
ನಮಗೆ ಭರವಸೆ ನೀಡಿದಂತೆ ನಡೆದುಕೊಂಡ ಹಿನ್ನೆಲೆಯಲ್ಲಿ ನಮಗೆ ದೊಡ್ಡ ಸಂತಸವಾಗಿದೆ. ನಮ್ಮ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ ಎಂದು ಹೇಳಿದರು.*
ಜನಜಾಗೃತಿ ಸಂಘದ ಉಪಾಧ್ಯಕ್ಷ ನಾಗರಾಜ ಕಿರಣಗಿ ಮಾತನಾಡಿ, ಬಸವರಾಜ್ ಕೊರವರ್ ಅವರು 12 ದಿನ ಹಾಗೂ ನಾನು ನಿರಂತರವಾಗಿ 6 ದಿನಗಳ ಕಾಲ ಅಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ನಮ್ಮ ನೂರಾರು ನೌಕರರು 30 ದಿನಗಳ ಕಾಲ ಸರದಿ ಉಪವಾಸ ಸತ್ಯಾಗ್ರಹ ನಡೆಸಿದ ಪರಿಣಾಮ ನಮ್ಮ ಹೋರಾಟ ಬೃಹತ್ ಜನಾಂದೋಲನವಾಗಿ ಮಾರ್ಪಟ್ಟು ನಮ್ಮ ಹೋರಾಟಕ್ಕೆ ಕೈ ಜೋಡಿಸಿದ ಅವಳಿ ನಗರದ ಸಾವಿರಾರು ಜನತೆ, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್, ಆಮ್ ಆದ್ಮಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳ ಮುಖಂಡರು ಒಂದು ತಿಂಗಳ ಕಾಲ ನಡೆಸಿದ ಪಕ್ಷಾತೀತ ಹೋರಾಟಕ್ಕೆ ಕೊನೆಗೂ ಜಯ ಸಂದಿದ್ದು, ಎಲ್ಲಾ 270ಕ್ಕೂ ಮರು ನೇಮಕ ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ನೀರು ನೌಕರರ ಸಂಘದ ಮಹಾಂತೇಶ ಗೌಡರ, ಬಸವರಾಜ ಮುಕ್ಕಲ, ಸೂರಿ, ಮಹೇಶ ಮೇಲಿನಮಠ, ಸೇರಿದಂತೆ ಅನೇಕ ಉಪಸ್ಥಿತರಿದ್ದರು.