ರಾಜ್ಯದ ಜಿಲ್ಲಾ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ…!
1 min readಬೆಂಗಳೂರು: ಮುಂದಿನ ತಿಂಗಳು ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿಯುತ್ತಿರುವ ಬೆನ್ನಲ್ಲೇ ಆಡಳಿತಾಧಿಕಾರಿಯನ್ನ ನೇಮಕ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಜಿಲ್ಲಾ ಪಂಚಾಯತಿಗಳ ಆಡಳಿತ ಅವಧಿಯು 2021ರ ಮೇ ತಿಂಗಳ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳಲಿದೆ. 2021-2026ರ ಅವಧಿಗೆ ರಾಜ್ಯದ ಜಿಲ್ಲಾ ಪಂಚಾಯತಿಗಳನ್ನ ರಚಿಸುವ ಸಂಬಂಧವಾಗಿ ಚುನಾವಣೆಯನ್ನ ನಡೆಸಲು ರಾಜ್ಯ ಚುನಾವಣಾ ಆಯೋಗ ಪ್ರಕ್ರಿಯೆಯನ್ನ ಪ್ರಾರಂಭಿಸಿರುತ್ತದೆ.
ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕಾಲಾವಕಾಶ ಬೇಕಾಗಿದ್ದು, 2021 ಮೇ-ಜೂನ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿರುವ ಜಿಲ್ಲಾ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನ ನೇಮಿಸುವ ಅವಶ್ಯಕತೆಯಿದೆ ಎಂದು ಆದೇಶದಲ್ಲಿ ನಮೂದು ಮಾಡಲಾಗಿದೆ.
ಜಿಲ್ಲಾ ಪಂಚಾಯತಿಯ ಅವಧಿ ಮುಗಿದ ಮರುದಿನದಿಂದಲೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶ ಮಾಡಲಾಗಿದೆ.