ಛೇ ದುರಂತ… ಜಿಲ್ಲಾ ಪಂಚಾಯತಿ ಸದಸ್ಯ ‘ಕರಿಮಾರಿ’ಗೆ ಬಲಿ…!

ಬಾಗಲಕೋಟ: ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಬಸವರಾಜ ಉದಪುಡಿ (42) ಬುಧವಾರ ನಿಧನರಾದರು. ಮೃತರಿಗೆ ತಾಯಿ, ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಹಾಗೂ ಸಹೋದರರು ಸೇರಿದಂತೆ ಅಪಾರ ಬಂಧುಗಳಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿಜ ಲೋಕಾಪುರದ ಬಸವರಾಜ ಉದುಪುಡಿ ಅವರು ಕೊರೋನಾದಿಂದ ಗುಣಮುಖರಾಗಿದ್ದಾರೆ.
ತದನಂತರ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಿನ ಚಿಕಿತ್ಸೆಗಾಗಿ ರಾಜಸ್ತಾನದ ಜೈಪುರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.